ಶಾಲೆಗೆ ಹೊರಟಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

student
Published on

ಕೋಟ: ಇಲ್ಲಿನ ಕೊರವಡಿ ನಿವಾಸಿ ಅನನ್ಯ (15) ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ


ಕೋಟ ಪಡುಕರೆ ಫ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಖಿನ್ನತೆಗೊಳಗಾಗಿದ್ದಳು. ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿ ನೋಡಿ ಬಂದು ನಂದಿಸಿದ್ದಾರೆ.ಸುಟ್ಟ ಗಾಯಗಳಾಗಿದ್ದ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದರೂ ಪ್ರಯೋಜನವಾಗದೆ ಅಸುನೀಗಿದ್ದಾಳೆ. ಮನೆಯಲ್ಲಿ ಅಜ್ಜಿ ಮತ್ತು ಆಕೆಯ ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ತಂದೆ ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net