ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ

Suicide
Published on

ಕಾಸರಗೋಡು: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಮನೆ ಸನಿಹದ ಆವರಣಗೋಡೆಯಿಲ್ಲದ ಬಾವಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಡ್ಕ ಕಮಲಂ ತೆಕ್ಕೇಕೆರೆ ನಿವಾಸಿ, ಕುಂಡಂಗುಳಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್‌ಟು ತರಗತಿ ವಿದ್ಯಾರ್ಥಿನಿ ಅಶ್ವತಿ(17) ಮೃತಪಟ್ಟವಳು. ಗುರುವಾರ ಬೆಳಗ್ಗೆಯಿಂದ ಅಶ್ವತಿ ನಾಪತ್ತೆಯಾಗಿದ್ದು, ಈ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹುಡುಕಾಟದ ಮಧ್ಯೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net