ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಲಿ

29-LNG-01
ಲಿಂಗಸುಗೂರು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕ ಮಾನಪ್ಪ ವಜ್ಜಲ್ ನೆರವೇರಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಪಾಮಯ್ಯ ಮುರಾರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ ಇತರರಿದ್ದರು.
Published on

ಲಿಂಗಸುಗೂರು: ಶಾಲಾ-ಕಾಲೇಜು ಕಟ್ಟಡಗಳು ಸೇರಿ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಪ್ರತಿ ವರ್ಷ 18 ರಿಂದ 20 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಗ್ರಂಥಾಲಯ ಕಟ್ಟಡ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ತಾಲೂಕು ಕಳೆದ 15 ವರ್ಷಕ್ಕೆ ಹೋಲಿಸಿದರೆ ಈಗ ವೇಗವಾಗಿ ಬೆಳೆಯುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿವೆ. ಒಂದು ಕೋಟಿ ರೂ. ವೆಚ್ಚದಲ್ಲಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ಒದಗಿಸಲಾಗಿದೆ. ಇದರ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ದುಶ್ಚಟದಿಂದ ದೂರವಿರಬೇಕು ಎಂದರು.

ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಮಾತನಾಡಿ, 2008-2009ರಲ್ಲಿ ಅಂದಿನ ಶಾಸಕರಾಗಿದ್ದ ಅಮರೇಗೌಡ ಪಾಟೀಲ್ ಬಯ್ಯಪುರ ಅವರು ಪಾಲಿಟೆಕ್ನಿಕ್, ಜಿಟಿಟಿಸಿ ಕಾಲೇಜು ಮಂಜೂರು ಮಾಡಿಸಿ, ಕಟ್ಟಡ ಉದ್ಘಾಟಿಸಿದ್ದರು. ವೃತ್ತಿಪರ ಕೋರ್ಸ್‌ಗಳ ಮುಖಾಂತರ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಶಾಸಕ ಮಾನಪ್ಪ ವಜ್ಜಲ್ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ಕೊಟ್ಟು ಗ್ರಂಥಾಲಯ ಕಟ್ಟಡ ಒದಗಿಸಿದ್ದು, ಪ್ರಯೋಜನ ಪಡೆಯಬೇಕು ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಪಾಮಯ್ಯ ಮುರಾರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ, ಟಿಎಪಿಎಂಎಸ್ ಅಧ್ಯಕ್ಷ ಶಶಿಧರಗೌಡ ಪಾಟೀಲ್, ಎಇಇ ಹನುಮಂತಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಪಾಟೀಲ್, ಪ್ರಾಚಾರ್ಯ ಮಲ್ಲಪ್ಪ ಸರ್ಜಾಪುರ, ಗುತ್ತಿಗೆದಾರ ಬಲವಂತರಾಯಗೌಡ, ಮಂಡಲ ಬಿಜೆಪಿ ಅಧ್ಯಕ್ಷ ಕೆ.ನಾಗಭೂಷಣ, ಪ್ರಮುಖರಾದ ಗಿರಿ ಮಲ್ಲನಗೌಡ ಪಾಟೀಲ್, ವೆಂಕನಗೌಡ ಐದನಾಳ, ಮುದಕಪ್ಪ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net