ಸಾಂಘಿಕ ಪ್ರಯತ್ನದಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ

26 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯ ರೂಪಿಸುವುದು ಶಿಕ್ಷಕರ ಕರ್ತವ್ಯ. ಈ ದಿಶೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರು ವಿಶೇಷ ಕಾರ್ಯಯೋಜನೆ ಹಮ್ಮಿಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಸಾಂಘಿಕ ಪ್ರಯತ್ನದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಂತ್ರಜ್ಞಾನದ ಯುಗದಲ್ಲಿ ಕಂಪ್ಯೂಟರ್, ಇಂಟರ್‌ನೆಟ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಷಯಗಳಲ್ಲಿ ಅಗತ್ಯ ಕೌಶಲಗಳನ್ನು ಗಳಿಸಿಕೊಳ್ಳದಿದ್ದರೆ ಯುವ ಸಮೂಹ ಉದ್ಯೋಗ ವಂಚಿತವಾಗುವ ಅಪಾಯವಿದೆ. ಹೀಗಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ನಡೆಸಿ ವರದಿ ನೀಡಬೇಕು ಎಂದರು.

ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಽಕಾರಿ ದೀಪಕ ಮಡಿವಾಳರ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net