ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು: ಸಿದ್ದಯ್ಯನಕೊಪ್ಪಲು ಬಳಿ ದುರಂತ

Student dies after drowning Mandya
Published on

ಮಂಡ್ಯ: ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದ ಬಳಿ ಶನಿವಾರ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ನಾಪತ್ತೆಯಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾನೆ.

ಮದ್ದೂರು ತಾಲೂಕು ಸೋಮನಹಳ್ಳಿ ಗ್ರಾಮದ ಅನಿಲ್ ಮತ್ತು ಉಮಾ ದಂಪತಿ ಮಗ ಯಶ್ವಂತ್(22) ಮೃತ ದುರ್ವೈವಿ. ಈತ ಸಿದ್ದಯ್ಯನಕೊಪ್ಪಲಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದನು. ಶನಿವಾರ ಮೂವರು ಸ್ನೇಹಿತರೊಟ್ಟಿಗೆ ನಾಲೆ ಬಳಿ ತೆರಳಿದ್ದು, ಕೈ ಕೈ ಹಿಡಿದುಕೊಂಡು ನಿಂತಿದ್ದ ವೇಳೆ ಕಾಲು ಜಾರಿ ಎಲ್ಲರೂ ನೀರೊಳಗೆ ಬಿದ್ದಿದ್ದರು. ಈ ಸಮಯದಲ್ಲಿ ಸ್ಥಳೀಯರು ಇಬ್ಬರನ್ನು ರಕ್ಷಣೆ ಮಾಡಿದ್ದರು.

ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಯಶ್ವಂತ್‌ಗಾಗಿ ಹುಡುಕಾಟ ನಡೆಸಿದರಾದರೂ ಪತ್ತೆಯಾಗಿರಲಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಭಾನುವಾರ ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದ್ದು, ಲಾಳನಕೆರೆ ಸಮೀಪ ಶವ ಪತ್ತೆಯಾಗಿದೆ. ನಂತರ ಜಿಲ್ಲಾಸ್ಪತ್ರೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಟುಂಬದವರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net