

ಶಿವಮೊಗ್ಗ: ಪುರದಾಳು ಗಾಮ ಪಂಚಾಯತ್ ವ್ಯಾಪ್ತಿಯ ಕೌಲಾಪುರ ಮರಾಠಿ ಕ್ಯಾಂಪ್‌ನಲ್ಲಿ ಕಳೆನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ 9ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಕೌಲಾಪುರ ಮರಾಠಿ ಕ್ಯಾಂಪ್‌ನ ನಾಗರಾಜ್(15) ಮೃತ ವಿದ್ಯಾರ್ಥಿ. ಈತ ಪುರದಾಳು ಪ್ರೌಶಾಲೆಯಲ್ಲಿ ಓದುತ್ತಿದ್ದ. ಮೂರು ದಿನಗಳ ಹಿಂದೆ ಮನೆಯಲ್ಲಿದ್ದ ಕಳೆನಾಶಕ ಸೇವಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.