ಪಾವಗಡ: ಪಟ್ಟಣದ ತುಮಕೂರು ರಸ್ತೆಯ ಕನ್ವೆನ್ಷನ್ ಹಾಲ್ ಬಳಿ ಶುಕ್ರವಾರ ಸರಕು ಸಾಗಣೆ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಪಟ್ಟಣದ ಪ್ರಕೃತಿ (16) ಮೃತೆ. ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರಕೃತಿ, ಗೆಳತಿ ಪ್ರೇರಣಾ ಜತೆಗೆ ದ್ವಿಚಕ್ರ ವಾಹನದಲ್ಲಿ ಟ್ಯೂಷನ್ಗೆ ಹೋಗುದ್ದ ವೇಳೆ ಸರಕು ಸಾಗಣೆ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಕುಳಿತಿದ್ದ ಪ್ರಕೃತಿ ಸ್ಥಳದಲ್ಲೇ ಮೃತಪಟ್ಟಿದ್ದು,
ಪ್ರೇರಣಾಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.