ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

crime
Published on

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿ ಬಳಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸುರತ್ಕಲ್ ಹೊಸಬೆಟ್ಟು ಮಾರುತಿ ನಗರ ನಿವಾಸಿ ವಿಶಾಖ್ ಐತಾಳ್ (20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಸಂದರ್ಭ ವಿರುದ್ಧ ದಿಕ್ಕಿನಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಬೈಕ್ ಸವಾರನ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ವಿಶಾಖ್ ಐತಾಳ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net