

ಮಂಗಳೂರು: ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿರುವ ಪ್ರಥಮ ಪಿಯುಸಿಯ 14 ವಿದ್ಯಾರ್ಥಿಗಳ ಮೇಲೆ ಅದೇ ಹಾಸ್ಟೆಲ್‌ನಲ್ಲಿರುವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬೆಲ್ಟ್, ವಿಕೇಟ್‌ಗಳಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾರೆ.
ಶರತ್ ಎಸ್., ಅಭಿಷೇಕ್, ಸುದೀಪ್, ರಾಕೇಶ್ ಹಾಗೂ ಸಂಗಡಿಗರು ಹಲ್ಲೆ ನಡೆಸಿದ್ದಾರೆ. ಯಾರಿಗಾದರೂ ದೂರು ನೀಡಿದರೆ ಮತ್ತೆ ಹೊಡೆಯುವುದಾಗಿ ಜೀವ ಬೆದರಿಕೆಯೊಡ್ಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳು ವಾಮದಪದವು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಈ ಬಗ್ಗೆ ಕಾಲೇಜು ಪ್ರಾಂಶುಪಾಲರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.