ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ, ಗಾಯ

accident-15
Published on

ಸುಳ್ಯ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಜಾಲ್ಸೂರು ಅಡ್ಕಾರು ಶಾಲಾ ವಿದ್ಯಾರ್ಥಿನಿ ಸಂಜೆ ಶಾಲೆ ಬಿಟ್ಟು ಮುಖ್ಯರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net