ವಿದ್ಯಾರ್ಥಿಗಳು ಕಾನೂನು ಜ್ಞಾನ ಪಡೆಯಲಿ

police station visite students
ದೇವದುರ್ಗದ ಪೊಲೀಸ್ ಠಾಣೆಯಲ್ಲಿ ಪಿಐ ಕೆ.ಹೊಸಕೇರಪ್ಪ ಕೊತ್ತದೊಡ್ಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ವೆಪನ್‌ಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕಿ ಶಿವನಾಗಮ್ಮ ಇದ್ದರು.
Published on

ದೇವದುರ್ಗ: ಕಾನೂನು ಜ್ಞಾನ ಹೊಂದಿದ್ದರೆ ಅಪರಾಧಗಳನ್ನು ತಡೆಯಲು ಸಾಧ್ಯ, ಇಗಾಗಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಭೇಟಿನೀಡಿ ಕಾನೂನು ಅರಿವು ಪಡೆದುಕೊಳ್ಳಬೇಕು ಎಂದು ಪಿಐ ಕೆ.ಹೊಸಕೇರಪ್ಪ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಗೆ ಭೇಟಿನೀಡಿದ್ದ ತಾಲೂಕಿನ ಕೊತ್ತದೊಡ್ಡಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು, ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಣೆ ಬಗ್ಗೆ ಜಾಗೃತಿ ಸಭೆಯಲ್ಲಿ ಗುರುವಾರ ಮಾತನಾಡಿದರು.

ಪ್ರತಿಯೊಬ್ಬರೂ ಕಾನೂನು ಅರೆತು, ಕಾನೂನು ಕೈಗೆತ್ತಿಕೊಳ್ಳದೆ ಸಮಾಜದಲ್ಲಿ ಶಾಂತಿ ಸುವ್ಯಸ್ಥೆ ಕಾಪಾಡಬೇಕು. ಸಮಾಜದಲ್ಲಿ ಶಾಂತಿನೆಲೆಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ.

ಪೊಲೀಸ್ ಇಲಾಖೆ ದಿನದ 24ಗಂಟೆ ಜನರ ಸೇವೆಗೆ ಸಿದ್ಧವಿದೆ. ಸುತ್ತಮುತ್ತ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆದರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ.

ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಇಲಾಖೆಯಿಂದ ಸಹಾಯವಾಣಿ 112 ಸಂಖ್ಯೆ ಇದ್ದು ದಿನದ 24ಗಂಟೆ ಕರೆಮಾಡಿ ಪರಿಹಾರ ಪಡೆಯಬಹುದು ಎಂದರು. ವಿದ್ಯಾರ್ಥಿಗಳು ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಬಗ್ಗೆ ಅರಿತು ಮನೆಯಲ್ಲಿ ಜಾಗೃತಿ ಮೂಡಿಸಬೇಕು.

ಮಾನವ ಕಳ್ಳಸಾಗಣೆ, ಮಾದಕ ವಸ್ತುಗಳ ದುಶ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅವುಗಳಿಂದ ದೂರವಿರಿ. ಬಾಲಕಿಯರ ರಕ್ಷಣೆಗೆ ಹಲವು ಕಾಯ್ದೆ ಕಾನೂನು ಜಾರಿಗೊಳಿಸಿದ್ದು ಸಂಕಷ್ಟ ಸಮಯದಲ್ಲಿ ನೆರವು ಪಡೆಯಬೇಕು.

ಯುವಜನತೆಗೆ ಹಲವು ಅವಕಾಶಗಳಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಸತ್‌ಪ್ರಜೆಗಳಾಗಿ ಜೀವನ ನಡೆಸಿ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಕ್ಷರಜ್ಞಾನ ಬಹುಮುಖ್ಯವಾಗಿದೆ.

ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಬೇಕು. ನಿರಂತರ ಅಧ್ಯಯನದಿಂದ ಜೀವನದಲ್ಲಿ ಗುರಿ ತಲುಪಲು ಸಾಧ್ಯ ಎಂದರು. ಸಂಚಾರ ಠಾಣೆ ಪಿಎಸ್‌ಐ ಕರೆಮ್ಮ, ಪಿಎಸ್‌ಐ ಸಿದ್ರಾಮ್, ಮುಖ್ಯಶಿಕ್ಷಕಿ ಶಿವನಾಗಮ್ಮ, ಸಿಬ್ಬಂದಿ ಮರಸಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net