ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇ ಗುರಿ

NSS NEW
Published on

ಹುಬ್ಬಳ್ಳಿ : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಹಾಗೂ ದೈಹಿಕ ಆರೋಗ್ಯದೊಂದಿಗೆ ವ್ಯಕ್ತಿತ್ವ ವಿಕಸನಗೊಳಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಗಳ ಮೂಲ ಉದ್ದೇಶವಾಗಿದೆ ಎಂದು ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಡಾ. ಸುರೇಶ ಹೊರಕೇರಿ ಹೇಳಿದರು.

ನಗರದ ಜೆ.ಎಸ್.ಎಸ್. ಸಕ್ರಿ ಕಾನೂನು ಮಹಾವಿದ್ಯಾಲಯವು ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2022-23 ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಎನ್​ಎಸ್​ಎಸ್ ಶಿಬಿರದಿಂದ ವಿದ್ಯಾರ್ಥಿಗಳಿಗೆ ಗ್ರಾಮದ ಬದುಕು ಪರಿಚಯವಾಗುತ್ತದೆ. ಗ್ರಾಮೀಣರ ಸಂಸ್ಕೃತಿ, ಶ್ರಮದ ಮಹತ್ವ, ಆಚಾರ, ವಿಚಾರಗಳು ತಿಳಿಯುತ್ತವೆ. ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ ಗೊಳ್ಳುತ್ತದೆ. ಈ ಶಿಬಿರ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯ ಪ್ರಜ್ಞೆ ಕಲಿಸಿಕೊಡುತ್ತದೆ ಎಂದರು.

ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ. ಎಸ್.ಎಂ. ಸಾತ್ಮಾರ ಮಾತನಾಡಿ, ಎನ್​ಎಸ್​ಎಸ್ ಶಿಬಿರಗಳು ಮನಸ್ಸುಗಳನ್ನು ಪರಿವರ್ತಿಸುತ್ತವೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜೆ.ಎಸ್.ಎಸ್. ಸಕ್ರಿ ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯು ಡಾ. ರೂಪಾ ಇಂಗಳಹಳ್ಳಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನದಲ್ಲಿ ಬಡ ವರ್ಗದವರಿಗೆ ಉಚಿತ ಕಾನೂನು ಸೇವೆ ಕೊಡುವುದರ ಮೂಲಕ ನ್ಯಾಯ ದೊರಕಿಸಿ ಕೊಟ್ಟು ಸಮಾಜಕ್ಕೆ ತಮ್ಮಿಂದಾದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಪ್ರೊ. ಬಾಬುಲಾಲ್ ದರಗದ, ಪ್ರೊ. ಶ್ರೀಶೈಲಾ ಮುಧೋಳ, ಪ್ರೊ. ಪೂರ್ಣಿಮಾ ಕುರಡಿಕೇರಿ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net