ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟ

11sirsi1
Published on

ಶಿರಸಿ: ನಗರದ ಎಂಇಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಶಸ್ತಿ ಪ್ರದಾನ ಮತ್ತು ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ, ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಪ್ರಗತಿ ಹೆಚ್ಚಿಸಿಕೊಳ್ಳುತ್ತ ಸಾಗಬೇಕು. ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿದ್ದು, ಈ ವೇಳೆ ತೋರುವ ಸಾಧನೆ ಜೀವನ ಪೂರ್ತಿ ನೆರವಾಗುತ್ತದೆ ಎಂದರು.

ಎಂಇಎಸ್ ಪ.ಪೂ. ಕಾಲೇಜಿನ ಉಪಸಮಿತಿ ಅಧ್ಯಕ್ಷ ಶ್ರೀಪಾದ ರಾಯ್ಸದ್ ವಡ್ಡಿನಕೊಪ್ಪ ಅವರು ಮಕ್ಕಳಿಗೆ ವಿದ್ಯಾರ್ಥಿ ಜೀವನದ ಕುರಿತು ಹಿತನುಡಿಗಳನ್ನಾಡಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಮುಖರಾದ ಡಾ. ಕೇಶವ ಕೊರ್ಸೆ, ಕಾರ್ಯಕ್ರಮದಲ್ಲಿ ಶಾಲಾ ಉಪಸಮಿತಿ ಅಧ್ಯಕ್ಷ ದೀಪಕ ಹೆಗಡೆ ದೊಡ್ಡೂರ, ಸದಸ್ಯರಾದ ದಿವಾಕರ ಭಟ್ಟ, ಶಿವಾನಂದ ಶಿವನಂಚಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶಕುಂತಲಾ, ಜ್ಯೋತಿ ಪೆಡ್ನೇಕರ್, ಫಾತಿಮಾ ಲೋಪಿಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net