

ಜಗಳೂರು: ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಶಿಕ್ಷಣ ದಾಸೋಹ, ಅನ್ನ ದಾಸೋಹ, ಆಧ್ಯಾತ್ಮ ದಾಸೋಹ ಜತೆ ಜ್ಞಾನ ದಾಸೋಹವೂ ಸಿಗುತ್ತ್ತಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು.
ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಶುಕ್ರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಉದ್ಘಾಟಿಸಿ ಮಾತನಾಡಿದರು.
ದಿ. ದೇವರಾಜ ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಅವರು ತೆಗೆದುಕೊಂಡಿದ್ದರ ಹಿನ್ನೆಲೆಯಲ್ಲಿ ಇಂದಿನ ಪೀಳಿಗೆ ಅದರ ಲಾಭ ಪಡೆಯುತ್ತಿದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಗಾಯತ್ರಿ ಮಾತನಾಡಿ, ಸಿದ್ದಮ್ಮನಹಳ್ಳಿ ಗ್ರಾಮದಲ್ಲಿದ್ದ ಆಶ್ರಮ ವಿದ್ಯಾರ್ಥಿ ನಿಲಯವನ್ನು ಗುತ್ತಿದುರ್ಗಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಮಾಡಲು ಆದೇಶವಾಗಿತ್ತು. ಆದರೆ, ಕೆಲ ತಾಂತ್ರಿಕ ತೊಂದರೆ ತಡವಾಗಿದ್ದು, ಇದೀಗ ಆರಂಭಗೊಂಡಿದೆ ಎಂದರು.
ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಶಾಸಕ ಸ್ಥಾನ ನಮ್ಮಪ್ಪನ ಆಸ್ತಿಯಲ್ಲ. ಮತದಾರರು ನೀಡುವ ತೀರ್ಪಿಗೆ ನಾನು ತಲೆ ಬಾಗುತ್ತೇನೆ ಎಂದರು.
ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿ, ಪ್ರೌಢಶಾಲೆ ಇರುವ ಕಡೆ ಎಸ್ಸಿ, ಎಸ್ಟಿ ಅಥವಾ ಬಿಸಿಎಂ ಹಾಸ್ಟೆಲ್ ನಿರ್ಮಿಸಬೇಕು. ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅರ್ಜಿ ಹಾಕುವ ಎಲ್ಲ್ಲ ಮಕ್ಕಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷ ಅರ್ಜುನ, ತಾಲೂಕು ವಿಸ್ತರಣಾ ಅಧಿಕಾರಿ ಅಸ್ಮ್ಮಾಭಾನು, ಪ್ರಭಾರ ಬಿಇಒ ಸುರೇಶ್ ರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಸದಸ್ಯ ಸಣ್ಣಸೂರಯ್ಯ, ನಿವೃತ್ತ ಅಧಿಕಾರಿ ಬಿ. ಮಹೇಶ್ವರಪ್ಪ, ಬೆಸ್ಕಾಂ ಎಇಇ ಗಿರೀಶ್ ನಾಯ್ಕ ಮತ್ತಿತರರಿದ್ದರು.