ನಾಯಕತ್ವದೊಂದಿಗೆ ಉತ್ತಮ ಪ್ರಜೆಗಳಾಗಿ...

Indrali Lead
Published on

ಕೆ.ಸುರೇಂದ್ರನಾಥ ಶೆಟ್ಟಿ ಕಿವಿಮಾತು

ಇಂದ್ರಾಳಿ ಪ್ರೌಢಶಾಲೆಯ ಸಂಸತ್​ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಇನ್ನಿತರ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಸ್ವಯಂ ಆಲೋಚನಾ ಶಕ್ತಿಯಿಂದ, ಆತ್ಮ ವಿಶ್ವಾಸದಿಂದ, ಮೇಧಾಶಕ್ತಿ ಹಾಗೂ ಕೌಶಲ ವೃದ್ಧಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೆ.ಸುರೇಂದ್ರನಾಥ ಶೆಟ್ಟಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಉಡುಪಿಯ ಇಂದ್ರಾಳಿಯಲ್ಲಿರುವ ಇಂದ್ರಾಳಿ ಆಂಗ್ಲ ಪ್ರೌಢಶಾಲೆಯಲ್ಲಿ ಜೂನ್ 14ರಂದು ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್​ ಹಾಗೂ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Indrali 2
Indrali 3
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಸಂಚಾಲಕ ಕೆ.ಅಣ್ಣಪ್ಪ ಶೆಣೈ, ಶಾಲಾ ದಿನಚರಿ ಪುಸ್ತಕ ಬಿಡುಗಡೆ ಮಾಡಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ವಿನಾಯಕ ಕಿಣಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
Indrali 4
Indrali 5
ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕೆ.ರತ್ನಾಕರ ಶೆಣೈ, ವಿದ್ಯಾ ಎ. ಪೈ, ಶಿಕ್ಷಕ&ರಕ್ಷಕ ಸಂಘದ ಅಧ್ಯಕ್ಷ ದಿನೇಶ ಹೆಗ್ಡೆ ಆತ್ರಾಡಿ, ಉಪಾಧ್ಯಕ್ಷ ಶಶಿರಾಜ ಕುಂದರ್​, ಕೋಶಾಧಿಕಾರಿ ವೈಷ್ಣವಿ ಕಾಮತ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರೇಷ್ಮಾ ಪ್ರಭು ಉಪಸ್ಥಿತರಿದ್ದರು.
Indrali 6
ವಿದ್ಯಾರ್ಥಿ ನಾಯಕಿ ಅಭಿನೇತ್ರಾ ಎಸ್​. ಆಚಾರ್ಯ ನೇತೃತ್ವದಲ್ಲಿ ವಿದ್ಯಾರ್ಥಿ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶ್ಲಾಘನಾ, ಸಂಜನಾ, ಕೃತಿ ಪ್ರಾರ್ಥಿಸಿದರು. ವೈಷ್ಣವಿ ಸ್ವಾಗತಿಸಿದರು. ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ರಿಹಾನ್​ ವಂದಿಸಿದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೆತ್ತವರು ಮತ್ತು ಶಿಕ್ಷಕರು ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ. ಜಾಗತೀಕರಣದ ಸ್ಪಧಾ೯ತ್ಮಕ ಜಗತ್ತಿನಲ್ಲಿ ಯಶಸ್ವಿಗಳಿಸುವಲ್ಲಿ ಇಚ್ಛಾಶಕ್ತಿ, ಕೌಶಲಶಕ್ತಿ, ಸಂವಹನ ಶಕ್ತಿ ವೃದ್ಧಿಸುವಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ. | ಕೆ.ಸುರೇಂದ್ರನಾಥ ಶೆಟ್ಟಿ. ನಿವೃತ್ತ ಉಪನ್ಯಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net