ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಆಗ್ರಹಿಸಿ ಕಲಬುರಗಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Student Protest Kalaburagi 13 JAN 20
Published on

ಕಲಬುರಗಿ: ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಥಮ ವರ್ಷದ‌ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುತ್ತಿರುವುದು ಸ್ವಾಗತಾರ್ಹ. ಈ ಯೋಜನೆಯನ್ನು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಚ್.ಎಸ್. ಕಾರ್ಯದರ್ಶಿ ಈರಣ್ಣ ಇಸಬಾ, ಶಿಲ್ಪಾ ಕೋಗನೂರ, ಸ್ನೇಹಾ ಕಟ್ಟಿಮನಿ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net