ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Screenshot_20230605_120727_WhatsApp.jpg
Published on

ರಾಯಚೂರು: ಪ್ರೌಢ ಶಾಲೆ ಮಂಜೂರು ಮಾಡ ಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲೆ ಬೀಗ ಜಡಿದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ‌ ಘಟನೆ ತಾಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೇ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು.

ನಾವು ಹತ್ತು ಕಿ ಮೀ ದೂರದ ಊರಿನ ಪ್ರೌಢ ಶಾಲೆಗೆ ಹೋಗಲು ಸಮಸ್ಯೆ ಆಗುತ್ತಿದೆ. ಇದರಿಂದ ನಮ್ಮ ಊರಿಗೆ ಪ್ರೌಢ ಶಾಲೆ ಕೊಡಿ ಎಂದು  ಪ್ರತಿಭಟನೆ.

ನಮ್ಮ ಊರಿನಲ್ಲಿ ಏಳನೇ ತರಗತಿ ಯಲ್ಲಿ ೨೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದೆವೆ. ಪ್ರೌಢಶಾಲೆ ಮಂಜೂರು ಮಾಡಿ ಅನುಕೂಲ ಕಲ್ಪಿಸುವಂತೆ ಒತ್ತಾಯ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net