

ಮೈಸೂರು: ಅಂತಾರಾಷ್ಟ್ರೀಯ ವಿಜ್ಞಾನದಲ್ಲಿ ಜಪಾನ್-ಏಷ್ಯಾ ಯುವ ವಿನಿಮಯ ಕಾರ್ಯಕ್ರಮಕ್ಕೆ ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆರ್.ಪ್ರಾರ್ಥನಾ ಆಯ್ಕೆಯಾಗಿದ್ದಾರೆ.
ಬಹು ಉಪಯೋಗಿಯಾದ ‘ಕಿಚನ್ ಮಿತ್ರ’ ಎಂಬ ಸಾಧನ ತಯಾರಿಸಿ ಪ್ರದರ್ಶಿಸುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದ ಪ್ರಾರ್ಥನಾ, ಈಗ 2025ರ ಜೂನ್ 15 ರಿಂದ 21ರ ವರೆಗೆ ಜಪಾನ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ, ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಬೋಧಕ ಬೋಧಕೇತರರು, ವಿದ್ಯಾರ್ಥಿನಿಯ ಸಾಧನೆಯನ್ನು ಪ್ರಶಂಸಿಸಿದ್ದಾರೆ.