ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತೆಂದು ನೊಂದ ವಿದ್ಯಾರ್ಥಿ ನೇಣಿಗೆ ಶರಣು

Published on

ಹೆಬ್ರಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಮನನೊಂದು ಹೆಬ್ರಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಅನ್ವಿತ್ ಶೆಟ್ಟಿ (14) ಭಾನುವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಕೆರೆಬೆಟ್ಟು ನಿವಾಸಿ ಸತೀಶ್ ಶೆಟ್ಟಿ ಹಾಗೂ ಮಮತಾ ಶೆಟ್ಟಿ ದಂಪತಿಯ ಪುತ್ರ. ಬೆಳಗ್ಗೆ ಬಾತ್‌ರೂಮ್‌ಗೆ ಹೋದ ಅಣ್ಣ ಕೆಲ ಸಮಯವಾದರೂ ಹೊರಗೆ ಬರದಿರುವುದನ್ನು ಕಂಡು ತಮ್ಮ ಬಾಗಿಲು ಬಡಿದರೂ ತೆಗೆದಿರಲಿಲ್ಲ, ಕಿಟಕಿಯಲ್ಲಿ ನೋಡಿದಾಗ ಬಾತ್‌ರೂಮಿನ ಕಬ್ಬಿಣದ ರಾಡ್‌ಗೆ ಚೂಡಿದಾರದ ಶಾಲು ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದು ಬಕೆಟ್ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಪಾಲಕರು ಹೆಬ್ರಿಯ ಖಾಸಗಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದನ್ನು ದೃಢೀಕರಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net