

ಸೋಮವಾರಪೇಟೆ: ಗೋಣಿಮರೂರು ಗ್ರಾಮದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಗುರುವಾರ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗೋಣಿಮರೂರು ಗ್ರಾಮದ ಅನಿಲ್ ಕುಮಾರ್ ಅವರ ಪುತ್ರಿ ಟಿ.ಎ.ವೈಶಾಲಿ(17) ಮೃತೆ. ಸೋಮವಾರಪೇಟೆ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ಒಂಟಿಯಾಗಿ ಇರುತ್ತಿದ್ದಳು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಗಳು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ಅನಿಲ್‌ಕುಮಾರ್ ನೀಡಿದ ದೂರಿನಂತೆ ಸೋಮವಾರಪೇಟೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.