ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

IMG-20230825-WA0018.jpg
Published on

ರಾಯಚೂರು: ಮನೆಯಲ್ಲಿ ಬುದ್ದಿವಾದ ಹೇಳಿದ್ದರಿಂದ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡುಕೊಂಡ ಘಟನೆ ದೇವದುರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಶುಕ್ತವಾರ ಜರುಗಿದೆ.

ತಾಲೂಕಿನ ಬಿ.ಆರ್.ಗುಂಡಾ ಗ್ರಾಮದ ಪವಿತ್ರ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 10ನೇ ತರಗತಿ ಓದುತ್ತಿದ್ದ ಪವಿತ್ರ ತರಗತಿ ಕೊಠಡಿಯಲ್ಲಿ ಫ್ಯಾನ್‌ಗೆ ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಓದಲು ಇಷ್ಟವಿಲ್ಲದೆ ಶಾಲೆಯಿಂದ ಮನೆಗೆ ಬರುತ್ತಿದ್ದ ಪವಿತ್ರ, ಮನೆಯಲ್ಲಿ ಬುದ್ಧಿ ಹೇಳಿ ಇಂದು ಶಾಲೆಗೆ ಬಿಟ್ಟು ಹೋಗಿದ್ದ ಪೋಷಕರು.

ಸಮಾಜ‌ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net