ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಶಿಕ್ಷಣ ಅಗತ್ಯ

web 3
Published on

ಬಾಳೆಹೊನ್ನೂರು: ವಿವಿಧ ಸೌಲಭ್ಯ ವಂಚಿತವಾಗಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಸಹಿತ ವ್ಯವಸ್ಥಿತವಾಗಿ ಅಂತರ್ಜಾಲದ ಮೂಲಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್​ನ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ವಿಭಾಗದ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್​ನಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಲ್ಯಾಪ್​ಟ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾಳಜಿಯಿಂದ ಹಾಗೂ ಮಕ್ಕಳು ಮನೆಯಲ್ಲೇ ಕುಳಿತು ಶಿಕ್ಷಣ ಪಡೆಯಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ 20 ಸಾವಿರ ಟ್ಯಾಬ್ ಹಾಗೂ 10 ಸಾವಿರ ಲ್ಯಾಪ್​ಟಾಪ್ ನೀಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net