ಎಫ್‌ಎಂಸಿ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

STUDENT UINION
Published on

ಮಡಿಕೇರಿ:

ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯ ಅಧೀನದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಭವ್ಯ ಇತಿಹಾಸವನ್ನು ಫೀ.ಮಾ. ಕಾರ್ಯಪ್ಪ ಕಾಲೇಜು ಹೊಂದಿದ್ದು, ವಿದ್ಯಾಸಂಸ್ಥೆಗೆ ಅಗೌರವ ತರುವ ಯಾವುದೇ ಕೆಲಸ ವಿದ್ಯಾರ್ಥಿಗಳು ಮಾಡಬಾರದು. ಶಿಸ್ತಿನೊಂದಿಗೆ ಮುನ್ನಡೆದರೆ ಸಾಧನೆ ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, ವಿದ್ಯಾರ್ಥಿ ಸಂಘದ ನಾಯಕರು ತಮ್ಮ ಜವಾಬ್ದಾರಿ ಅರಿತು ಮುನ್ನಡೆಯಬೇಕು. ರಾಷ್ಟçದ ಅಭಿವೃದ್ಧಿಯಲ್ಲಿ ಯುವಪಡೆಯ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.

ಸಂಘದ ಸಲಹೆಗಾರ ತಳವಾರ ಬಿ.ಹೆಚ್. ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಪ್ರೊ. ತಿಪ್ಪೇಸ್ವಾಮಿ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥೆ ಡಾ.ನಯನ ಕಶ್ಯಪ್, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಪ್ರಮುಖರಾದ ಡಾ. ಮಹದೇವಯ್ಯ, ಡಾ. ಶೃಂಗಾರ್, ರಾಜೀವ್, ಹೆಚ್. ರಮೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net