ಪಠ್ಯೇತರ ಕಾರ್ಯಗಳಲ್ಲಿ ಮಕ್ಕಳನ್ನು ತೊಡಗಿಸಿ...

Puraskaara 1
Published on

ಪಾಲಕರಿಗೆ ಪ್ರೊ.ಸುರೇಂದ್ರನಾಥ ಶೆಟ್ಟಿ ಸಲಹೆ

ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

ವಿಜಯವಾಣಿ ಸುದ್ದಿಜಾಲ ಉಡುಪಿ

ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಕೇವಲ ಅಂಕಗಳಿಂದ ಅಳೆಯುವುದು ಸರಿಯಲ್ಲ. ಅವರ ಸಮಗ್ರ ವ್ಯಕ್ತಿತ್ವವನ್ನು ಅಳೆಯುವುದೇ ನಿಜವಾದ ಮೌಲ್ಯಮಾಪನ. ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪಾಲಕರು ಹಾಗೂ ಶಿಕ್ಷಕರು ಸಹಕರಿಸಬೇಕು. ಅದು ಜವಾಬ್ದಾರಿಯೂ ಆಗಿದೆ ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಸಲಹೆ ನೀಡಿದರು.

ಉಡುಪಿಯ ಹಿರಿಯಡ್ಕದಲ್ಲಿರುವ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಜುಲೈ 18ರಂದು ಸಂಜೆ ಆಯೋಜಿಸಿದ್ದ ವಿದ್ಯಾರ್ಥಿ ಸಂಘ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಂಚಾಲಕ ಡಾ. ಎನ್​.ಎಸ್​. ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಎಸ್​ಡಿಎಂಸಿ ಉಪಾಧ್ಯಕ್ಷ ಬಿ.ಎಲ್​. ವಿಶ್ವಾಸ, ಉದ್ಯಮಿ ದೇವರಾಯ ನಾಯಕ, ಉಪ ಪ್ರಾಂಶುಪಾಲ ಪ್ರಕಾಶ ಪ್ರಭು, ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಶರತ್​ ಹಿರಿಯಡ್ಕ ಉಪಸ್ಥಿತರಿದ್ದರು.

ಹಿರಿಯ ಉಪನ್ಯಾಸಕಿ ವೀಣಾ ನಾಯಕ ಪ್ರತಿಜ್ಞಾ ವಿಧಿ ಬೊಧಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ತ್ರಿಶಾ ಸ್ವಾಗತಿಸಿದರು. ಉಪನ್ಯಾಸಕ ಮಹೇಶ ವಂದಿಸಿದರು. ರಾಜ್ಯಶಾಸ್ತ್ರ ಪ್ರಾಧ್ಯಾಪಕ ದೇವರಾಯ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಣವೆಂದರೆ ಕೇವಲ ಖಾಲಿ ಕೊಡಪಾನಗಳಿಗೆ ನೀರು ತುಂಬಿಸುವ ಕೆಲಸವಲ್ಲ. ಗಳಿಸಿದ ಜ್ಞಾನವನ್ನು ವಾಸ್ತವಿಕ ಬದುಕಿಗೆ ಅಳವಡಿಸಿಕೊಳ್ಳುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಬೆಳೆಸುವಲ್ಲಿ ಹಿರಿಯಡ್ಕ ಸರ್ಕಾರಿ ಪ.ಪೂ. ಕಾಲೇಜು ಪರಿಪೂರ್ಣ ಪರಿಕರ-ಪರಿಸರ ಹೊಂದಿರುವ ವಿದ್ಯಾಸಂಸ್ಥೆಯಾಗಿದೆ. | ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ. ನಿವೃತ್ತ ಅಧ್ಯಾಪಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net