

ನರೇಗಲ್ಲ: ಇತ್ತೀಚೆಗೆ ಪ್ರಕಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆದ ಕಾರಣದಿಂದಾಗಿ ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಪಟ್ಟಣದ ರಾಕೇಶ ನಾಗೇಶಪ್ಪ ಮಣ್ಣೋಡ್ಡರ (16)ಆತ್ಮಹತ್ಯೆ ಮಾಡಿಕೊಂಡವ. ಫಲಿತಾಂಶ ಪ್ರಕಟವಾದ ದಿನದಿಂದ ಫೇಲ್ ಆಗಿದ್ದನ್ನೇ ಮನಸಿಗೆ ತೆಗೆದುಕೊಂಡಿದ್ದ ವಿದ್ಯಾರ್ಥಿ, ಅದನ್ನೇ ಹೆಚ್ಚಾಗಿ ವಿಚಾರ ಮಾಡುತ್ತಿದ್ದ. ಇದೇ ವಿಷಯಕ್ಕೆ ಮನನೊಂದು ನರೇಗಲ್ಲ ಬಸ್ ನಿಲ್ದಾಣದ ಎದುರಿಗೆ ಇರುವ ಸರ್ಕಾರಿ ಶಾಲೆ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ನರೇಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.