

ಕಾರ್ಕಳ: ತಾಲೂಕಿನ ದುರ್ಗಾ ಗ್ರಾಮದಲ್ಲಿ ಗುರುವಾರ ನದಿಗೆ ಈಜಲು ಇಳಿದ ಉಡುಪಿ ಮಿಲಾಗ್ರಿಸ್ ಕಾಲೇಜಿನ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿ ಜಾಯಲ್ ಡಯಾಸ್(19) ಎಂಬಾತ ನೀರುಪಾಲಾಗಿದ್ದಾನೆ. ಏಳು ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.