

ಬೆಳಗಾವಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಈಚೆಗೆ ಆಯೋಜಿಸಿದ್ದ ಶಾಲಾ ಮಕ್ಕಳ ಕ್ರೀಡಾಕೂಟದ 10 ಮೀ. ಶೂಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿ ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ಮಂಜಿರಿ ಜೀಬಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಶೂಟಿಂಗ್ ಸ್ಪರ್ಧೆಯಲ್ಲಿ ನೂರಕ್ಕಿಂತ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಮಂಜಿರಿ 400ಕ್ಕೆ 355 ಅಂಕ ಪಡೆದು ಮೊದಲಿಗಳಾಗಿ ಹೊರಹೊಮ್ಮಿದಳು. ಡಿ.19ರಿಂದ 24ರ ವರೆಗೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾಳೆ.