ವಿದ್ಯಾರ್ಥಿಗಳ ಸಾಧನೆ

6 Dwd 5
Published on

ಧಾರವಾಡ: ಇತ್ತೀಚೆಗೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸಂಸ್ಕೃತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಇಲ್ಲಿನ ರಾಷ್ಟೊತ್ಥಾನ ವಿದ್ಯಾಕೇಂದ್ರದ ಮೂವರು ವಿದ್ಯಾರ್ಥಿಗಳು ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ತೋಳಮಟ್ಟಿ, ದಾನೇಶ ಎಂ.ವಿ., ಆದಿತ್ಯ ಜನಾದ್ರಿ ಪ್ರಥಮ ಸ್ಥಾನ ಪಡೆದು ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಶ್ರೇಯಸ್ ಯಮಕನಮರಡಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
ಸಾಧಕ ವಿದ್ಯಾರ್ಥಿಗಳನ್ನು ಶಾಲೆಯ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ್, ಪ್ರಾಚಾರ್ಯೆ ಡಾ. ಅನಿತಾ ರೈ, ಆಡಳಿತಾಽಕಾರಿ ಕುಮಾರಸ್ವಾಮಿ ಕುಲಕರ್ಣಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net