ವಿಜ್ಞಾನ ವಿಚಾರಗೋಷ್ಠಿ, ನಾಟಕದಲ್ಲಿ ಉತ್ತಮ ಸಾಧನೆ

IMG-20230913-WA0024
Published on

ಧಾರವಾಡ: ತಾಲೂಕಿನ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಗುರುಭವನದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ನಾಟಕ ಸ್ಪರ್ಧೆಯಲ್ಲಿ ಮನಗುಂಡಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಶಾಲಾ ವಿದ್ಯಾರ್ಥಿ ಅನ್ನಪೂರ್ಣಾ ಹೊಸಅಂಗಡಿ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಮಕ್ಕಳು ಪ್ರದರ್ಶಿಸಿದ ನಾಟಕ ತೃತೀಯ ಸ್ಥಾನ ಪಡೆದಿದೆ. ಈ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕ ಪ್ರಮೋದ ವಾದಿರಾಜ ಮಾರ್ಗದರ್ಶನ ನೀಡಿದ್ದರು.
ಮಕ್ಕಳ ಸಾಧನೆಗೆ ಶಾಲಾ ಎಸ್‌ಡಿಎಂಸಿ ಸದಸ್ಯರು, ಮುಖ್ಯಾಧ್ಯಾಪಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net