ಹಾಲು ಕುಡಿದ 25ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Dundasi School Milk
Published on

ಹಾವೇರಿ: ಶಾಲೆಯಲ್ಲಿ ಹಾಲು ಕುಡಿದು 25ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶಿಗ್ಗಾಂವಿ ತಾಲೂಕಿನ ದುಂಡಸಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕುಡಿಯಲು ಹಾಲು ವಿತರಿಸಲಾಗಿತ್ತು. ಹಾಲು ಕುಡಿದ ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡಿದ್ದರು.

ಕೂಡಲೇ ವಿದ್ಯಾರ್ಥಿಗಳನ್ನು ದುಂಡಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.

ತೀವ್ರವಾಗಿ ಅಸ್ವಸ್ಥಗೊಂಡ ಐವರು ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಿಇಒ ಅಂಬಿಗೇರ, ತಾಲೂಕು ಪಂಚಾಯ್ತಿ ಎಒ ಪ್ರಶಾಂತ ಸುರಕಾರಿ ಹಾಗೂ ತಡಸ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಯಾವ ಕಾರಣಕ್ಕೆ ಹೀಗಾಯ್ತು ಎಂಬ ಕುರಿತು ತಡಸ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net