ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14blrp2
Published on

ಬೇಲೂರು: ಪ್ರಸಕ್ತ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೇಲೂರಿನ ದಿವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ದಿವ್ಯ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಗೌಡೇಗೌಡ ಮಾತನಾಡಿ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಭವಾನಿ ಚಕ್ರ ಎಸೆತದಲ್ಲಿ ಪ್ರಥಮ, ನಿಧಾ ಬಾನು ಹ್ಯಾಮರ್ ಥ್ರೋನಲ್ಲಿ ಪ್ರಥಮ ಹಾಗೂ ಡಿ.ಸಂಜಯ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆ ಹಾಗೂ ಬೇಲೂರಿಗೆ ಕೀರ್ತಿ ತಂದಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಮುಂದಿನ ಹಂತದಲ್ಲೂ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.
ಮುಖ್ಯಶಿಕ್ಷಕರಾದ ಉಮೇಶ್, ಚೇತನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net