ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಿರಿ

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಿರಿ
Published on

ಅರಕಲಗೂಡು: ವಿದ್ಯಾರ್ಥಿಗಳು ತಮಗಿಷ್ಟವಾದ ಕ್ರೀಡೆಗಳಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಹೇಳಿದರು.

ತಾಲೂಕಿನ ಬೈಚನಹಳ್ಳಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಜ್ಯೋತಿ ಸ್ವೀಕರಿಸಿ ಮಾತನಾಡಿದರು. ಆಟಗಾರ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್, ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಯ್ಯ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್, ಕಾಂತರಾಜು, ರಘುವರ್ ಇತರರು ಇದ್ದರು. 52 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net