ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ

Students develop leadership qualities
ವಿಜಯಪುರದ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಸಂಸತ್​ ಚುನಾವಣೆಯಲ್ಲಿ ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ, ಎ.ಎಚ್​. ಕೊಳಮಲಿ ಮತ್ತಿತರರಿದ್ದಾರೆ.
Published on

ವಿಜಯಪುರ: ಶಾಲಾ ಹಂತದಲ್ಲೇ ಚುನಾವಣೆ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದರಿಂದ ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಚೇತನಾ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.

ನಗರದ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಾಲಾ ಸಂಸತ್​ ಚುನಾವಣೆಯಲ್ಲಿ ಚುನಾವಣೆ ಅಧಿಕಾರಿಯಾಗಿ ವಿದ್ಯಾರ್ಥಿಗಳಿಂದ ನಾಮಪತ್ರ ಸ್ವೀಕರಿಸಿ ಅವರು ಮಾತನಾಡಿದರು.

ಮುಖ್ಯಶಿಕ್ಷಕ ಎ.ಎಚ್​. ಕೊಳಮಲಿ ಮಾತನಾಡಿ, ಇವತ್ತಿನ ಮಕ್ಕಳೇ ನಾಳಿನ ಸುಭದ್ರವಾದ ರಾಷ್ಟ್ರ ನಿರ್ಮಿಸುವವರು. ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ನಾಯಕತ್ವದ ಗುಣ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಲು ಸಾಧ್ಯ. ನಾಯಕತ್ವ ಗುಣಕ್ಕೆ ಶಾಲಾ ಸಂಸತ್​ ಚುನಾವಣೆ ಅಡಿಪಾಯ ಎಂದು ತಿಳಿಸಿದರು.

ಸಮಾಜ ವಿಜ್ಞಾನದ ಶಿಕ್ಷಕ ಗಿರೀಶ ಬಿರಾದಾರ, ಸಿ.ಎಸ್​. ವಾಲಿ, ಸಾಗರ ಕುಲಕರ್ಣಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net