ಪದವಿ ತರಗತಿಗೆ ಸೇರಲು ವಿದ್ಯಾರ್ಥಿಗಳು ಹಿಂದೇಟು

19HDK00005
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
Published on

ಎಚ್.ಡಿ. ಕೋಟೆ: ದೇಶದಲ್ಲಿ ಶೇ.28 ವಿದ್ಯಾರ್ಥಿಗಳು ಮಾತ್ರ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ನಮಿತಾ ತಿಮ್ಮಯ್ಯ ತಿಳಿಸಿದರು.


ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಗುರುವಾರ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ನೂತನ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಎನ್‌ಎಸ್‌ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಿಯುಸಿ ಮುಗಿದ ಬಳಿಕ ಪದವಿ ತರಗತಿಗಳಿಗೆ ಸೇರಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಕೆಲವರಿಗೆ ಓದಿನ ಕಡೆ ಗಮನವಿಲ್ಲದಿರುವುದು, ಆಸಕ್ತಿ ಇಲ್ಲದಿರುವುದು ಒಂದು ಕಾರಣವಾದರೆ, ಮತ್ತೊಂದೆಡೆ ಪಾಲಕರಿಗೆ ಓದಿಸುವ ಶಕ್ತಿ ಇಲ್ಲದಿರುವುದು. ಇದರಿಂದ ಉದ್ಯೋಗ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದರು.


ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಸಮಯ ಕಳೆಯಬೇಕು. ಇತ್ತೀಚಿನ ದಿನಗಳಲ್ಲಿ ರೀಲ್ಸ್ ವ್ಯಾಮೋಹದ ಹುಚ್ಚಿಗೆ ಬಿದ್ದು ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಬೇಸರಿಸಿದರು.


ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜೆ.ಎನ್.ವೆಂಕಟೇಶ್ ಮಾತನಾಡಿ, ಆದಿಚುಂಚನಗಿರಿ ಕಾಲೇಜು ಆರಂಭದ ದಿನಗಳಲ್ಲಿ 30 ವಿದ್ಯಾರ್ಥಿಗಳು ದಾಖಲಾಗಿದ್ದರು. ಪ್ರಸ್ತುತ ಸಾಲಿನಲ್ಲಿ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಜತೆಗೆ ಧ್ಯಾನದತ್ತ ಗಮನಹರಿಸಿ ತಮ್ಮ ಮನಸ್ಸಿನ ಮೇಲೆ ಹಿಡಿತವನ್ನು ಸಾಧಿಸಬೇಕಾದ ಅನಿವಾರ್ಯತೆ ಇದೆ ಎಂದರು.


ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ವಿದ್ಯೆ ಯಾರ ಸ್ವತ್ತು ಅಲ್ಲ. ಆಸಕ್ತಿ ಇದ್ದಲ್ಲಿ ಎಲ್ಲರಿಗೂ ಒಲಿಯುತ್ತದೆ. ವಿದ್ಯೆಯಿಂದ ಸಮಾಜದಲ್ಲಿ ಮಾನ್ಯತೆ, ಗೌರವ ದೊರೆಯುತ್ತದೆ. ಜ್ಞಾನದೊಂದಿಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಂಸ್ಕಾರವು ಮಾರ್ಗದರ್ಶನವಾಗಲಿದೆ ಎಂದು ಸಲಹೆ ನೀಡಿದರು.
ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೆ.ಪಿ.ಬಸವೇಗೌಡ ಮಾತನಾಡಿ, ಈವರೆಗೆ ವಿದ್ಯಾಸಂಸ್ಥೆಯಿಂದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪದವಿ ಪಡೆದುಕೊಂಡಿದ್ದಾರೆ ಎಂದರು.


ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕ ಪಡೆದ, ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮೈಸೂರಿನ ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಚಂದ್ರೇಗೌಡ, ಸೆನೆಟ್ ಮಾಜಿ ಸದಸ್ಯ ಕೃಷ್ಣೇಗೌಡ, ಎನ್‌ಎಸ್‌ಎಸ್ ಸಲಹಾ ಸಮಿತಿ ಸದಸ್ಯ ಎ.ಜೆ.ಕಾಳೇಗೌಡ, ಅಂತರಸಂತೆ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮೈನಾ, ಬೀಚನಹಳ್ಳಿ ಪ್ರೌಢಶಾಲೆ ಮುಖ್ಯಶಿಕ್ಷಕ ಶ್ರೀನಿವಾಸ್, ಸೇಂಟ್ ಮೇರಿಸ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂತೋಷ್, ಬೆಳಗನಹಳ್ಳಿ ರಾಜೇಂದ್ರ, ದೈಹಿಕ ಶಿಕ್ಷಣ ನಿರ್ದೇಶಕ ಕಲ್ಲೇಶ್‌ಗೌಡ, ಕಾಲೇಜಿನ ಸಿಬ್ಬಂದಿ ಬೈರೇಗೌಡ, ರಾಜೇಶ್, ರಾಮಚಂದ್ರ, ಸಿದ್ದೇಗೌಡ, ರವೀಶ್, ಚನ್ನಕೇಶವನಾಯಕ, ಚಿತ್ರಾ, ಪ್ರೀತಿ, ಚಂದನಾ, ಶಾಂಭವಿ, ಸಂಗೀತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net