ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ

MEETING
ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ ತಹಸೀಲ್ದಾರ್ ಟಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಪಂ ಇಒ ವೈ. ರವಿಕುಮಾರ್ ಇದ್ದರು.
Published on

ಕೂಡ್ಲಿಗಿ: ಸ್ವಾತಂತ್ರ್ಯ ದಿನಾಚರಣೆಯನ್ನು ಈ ಬಾರಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ವರ ಸಹಕಾರ ಅತ್ಯಗತ್ಯ ಎಂದು ತಹಸೀಲ್ದಾರ್ ಟಿ.ಜಗದೀಶ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಸ್ವಾತಂತ್ರ್ಯ ದಿನದಂದು ಬೆಳಗ್ಗೆ ತಾಲೂಕಿನ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಹಾಗೂ ಅಂಬೇಡ್ಕರ್ ಸೇರಿದಂತೆ ಮಹಾನ್ ನಾಯಕರ ಭಾವಚಿತ್ರಗಳನ್ನು ಪೂಜಿಸಿ ನಂತರ ಧ್ವಜಾರೋಹಣ ಮಾಡುವಂತೆ ಸೂಚನೆ ನೀಡಿದರು.

ಶಾಲಾ ಮಕ್ಕಳಿಗೆ ಗ್ರಾಮೀಣ ಭಾಗದಿಂದ ಆಗಮಿಸಲು ಅಂದು ಬೆಳಗ್ಗೆ ಸೂಕ್ತ ಬಸ್ ವ್ಯವಸ್ಥೆ ಕೈಗೊಳ್ಳಲು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಎಲ್ಲಾ ಶಾಲೆ ಮಕ್ಕಳು ಸೇರಿ ಬೀದಿಗಳಲ್ಲಿ ಪ್ರಭಾತ್ ಪೇರಿ ನಡೆಸುವುದರಿಂದ ಭಾರಿ ವಾಹನಗಳನ್ನು ಬೆಳಗ್ಗೆ ಹನ್ನೆರಡು ಗಂಟೆಯವರೆಗೂ ನಿಷೇಧಿಸುವಂತೆ ದಲಿತ ಮುಖಂಡರಾದ ಎಸ್.ದುರುಗೇಶ, ಬಂಡೆ ರಾಘವೇಂದ್ರ, ಕಾಟೇರ್ ಹಾಲೇಶ್ ತಿಳಿಸಿದರು.

ಸನ್ಮಾನ

ಆರೋಗ್ಯ ಇಲಾಖೆ ಹಾಗೂ ಗ್ರಾಪಂನ ಸ್ವಚ್ಛತಾ ಕಾರ್ಯ ಮಾಡುವ ಆಯ್ದ ಸಿಬ್ಬಂದಿಗಳನ್ನು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸನ್ಮಾನ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಪಟ್ಟಣದ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಹಂತದಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಪ್ರಥಮ, ದ್ವಿತೀಯ ಬಹುಮಾನಗಳನ್ನು ನೀಡಲು ಚರ್ಚಿಸಲಾಯಿತು. ಆಯ್ದ ಹತ್ತು ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದರು. ಯಾವುದೇ ಅವಘಡಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್, ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ಸೇವೆಗಳ ವ್ಯವಸ್ಥೆ ಕೈಗೊಳ್ಳುವಂತೆ ತಿಳಿಸಿದರು.

ತಾಪಂ ಇಒ ವೈ.ರವಿಕುಮಾರ್, ಶಾಸಕರ ಆಪ್ತ ಸಹಾಯಕ ಮರುಳಸಿದ್ದಪ್ಪ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್,ಎಸ್.ದುರುಗೇಶ, ಕಾಟೇರ್ ಹಾಲೇಶ, ಬಂಡೆ ರಾಘವೇಂದ್ರ, ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಎಂ.ವೀರಯ್ಯ, ಬ್ಯಾಳಿ ವಿಜಯಕುಮಾರ ಗೌಡ, ವಿಭೂತಿ ವೀರಣ್ಣ, ಮಾದೇಹಳ್ಳಿ ನಜೀರ್, ನರೇಂದ್ರ ಸ್ವಾಮಿ,ಮ್ಯಾಕಿ ಚಂದ್ರಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net