ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಸಾಮರ್ಥ್ಯ ಗುರುಗಳ ಕೈಯಲ್ಲಿ

5Jaggi4
ಬೆಳಗಾವಿ ಗಾಂಧಿ ಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಆಸೀಫ್ ಸೇಠ್, ಜಿಪಂ ಸಿಇಒ ರಾಹುಲ್ ಶಿಂಧೆ, ಡಿಡಿಪಿಐ ಲೀಲಾವತಿ ಹಿರೇಮಠ, ಸಕ್ರೆಪ್ಪಗೌಡ ಬಿರಾದಾರ, ಬಸವರಾಜ ನಾಲತವಾಡ, ಐ.ಡಿ. ಹಿರೇಮಠ ಇದ್ದರು.
Published on

ಬೆಳಗಾವಿ: ವಿದ್ಯಾರ್ಥಿಗಳನ್ನು ಜ್ಞಾನದತ್ತ ಕೊಂಡೊಯ್ಯುವ ಶಿಕ್ಷಕರ ಸೇವೆ ಅಮೋಘವಾದದ್ದು, ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ತಿಳಿಸಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ನಗರ ವಲಯ ಮಟ್ಟದ ಪ್ರತಿಭಾಕಾರಂಜಿ, ಕಲೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ತಮ್ಮ ಜ್ಞಾನದ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣಾರ್ಥ ಪ್ರತಿ ವರ್ಷ ಸೆ.5ರಂದು ಶಿಕ್ಷಕರ ದಿನ ಆಚರಿಸಲಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕಾರ್ಯ ಮಹತ್ವದ್ದಾಗಿದೆ ಎಂದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬಲಿಷ್ಠ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿದ್ಯೆ, ಬುದ್ಧಿ, ಕಲಿಸಿ ಬದುಕು ರೂಪಿಸುವ ಶಿಲ್ಪಿ ಎಂದರು.

ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ ಮಾತನಾಡಿ, ಪ್ರತಿ ವಿದ್ಯಾರ್ಥಿ ಜೀವನ ಉತ್ತಮವಾಗಿಸಲು ಶಿಕ್ಷಕರ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳು ತಂದೆ-ತಾಯಿಯನ್ನು ಗೌರವಿಸುವಂತೆ ಶಿಕ್ಷಕರನ್ನು ಗೌರವಿಸಬೇಕು ಎಂದರು.

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಹಾಗೂ ಬೆಳಗಾವಿ ನಗರ ವಲಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಜಿಲ್ಲಾಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿ ಪ್ರದಾನ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರೌಢ ಶಿಕ್ಷಣ ಮಂಡಳಿ ಬೆಳಗಾವಿ ವಿಭಾಗದ ಪದನಿಮಿತ್ತ ಸಹ ನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ, ಡಯಟ್ ಮಣ್ಣೂರ ಉಪನಿರ್ದೇಶಕ ಬಸವರಾಜ ನಾಲತವಾಡ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಡಿ. ಹಿರೇಮಠ, ಉಪನಿರ್ದೇಶಕರ ಕಚೇರಿ ಮತ್ತು ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿ, ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು

ಎಸ್.ಎಸ್. ಬನಸಿ, ಚಂದ್ರಶೇಖರ ಶೀಗಿಹಳ್ಳಿ, ವೈದಾ ಜಮಾದಾರ, ಗುರುಸಿದ್ದಪ್ಪ ತಳವಾರ, ರುಕ್ಮಿಣಿ ಹೂಗಾರ, ಶಖಿಲಾ ಬೇಗಮ ರಾಜಗೋಳಕರ, ಶುಭಾಂಗಿ ಪಾಟೀಲ, ಸಂಜೀವಕುಮಾರ ಕೋಷ್ಠಿ, ಜಮೈದಾ ಶೇಖ್, ನಹೀಮಾ ಜಮಾದಾರ್, ಸ್ಮಿತಾ ನವರತ್ತೆ, ಶೋಭಾ ಇತಾಪೆ, ಪ್ರಲ್ಹಾದ ದಳವಿ, ಆನಂದ ಢಗೆ, ಬಿ.ಎಲ್. ಕುಂಬಾರ, ಡಿ.ಎಸ್. ದೇಸಾಯಿ, ಎಂ.ಐ. ತಿಗಡಿ, ಎಂ.ಎಂ. ದೇವಕರಿ, ಎಂ.ಎಸ್. ಬೈಲವಾಡ, ಸಂಧ್ಯಾ ಬೆಣಚೆಕರ, ಗುಡ್ಡೇಸಾಬ್ ಬಾವಾಖಾನ್, ಅಶ್ವಿನಿ ಪಾತಾಳಿ, ಸಂಗೀತಾ ಹೊಸೂರು, ನಾಗಪ್ಪ ಮುದಕಟ್ಟಿ, ಮಹಾಂತೇಶ ಕಿತ್ತಳಿ, ವಿನಾಯಕ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net