ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಅಗತ್ಯ : ಡಾ.ಶೀಲಾ ಶ್ರೀಧರ್

sadvidya college
Published on

ಮೈಸೂರು: ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಉತ್ತಮ ಸಂಸ್ಕಾರ ನೀಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ನೃತ್ಯ ವಿಭಾಗದ ಮುಖ್ಯಸ್ಥೆ ಡಾ.ಶೀಲಾ ಶ್ರೀಧರ್ ಹೇಳಿದರು.

ನಗರದ ಸದ್ವಿದ್ಯಾ ಸಂಯುಕ್ತ ಪದವಿ ಕಾಲೇಜು ವತಿಯಿಂದ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸಮರ್ಥ ಸದ್ವಿದ್ಯಾ’ ಅಂತರ ಕಾಲೇಜು ಸಂಗೀತ, ಸಾಹಿತ್ಯ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಬೇಕು. ಇದಕ್ಕೆ ಕಲೆ, ಸಾಹಿತ್ಯ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ದೇಶದ ಸಂಸ್ಕೃತಿ ಪ್ರತಿಯೊಬ್ಬರಲ್ಲಿ ಉತ್ತಮ ಸಂಸ್ಕಾರವನ್ನು ಮೂಡಿಸುತ್ತದೆ. ಆದರೆ, ಇತ್ತೀಚೆಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಜನರು ಮಾರು ಹೋಗುತ್ತಿರುವುದು ಬೇಸರದ ಸಂಗತಿ ಎಂದರು.

ವೇದಿಕೆಯಲ್ಲಿ ಸದ್ವಿದ್ಯಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರೊ.ಎಂ.ಎಸ್.ಕೆ. ನರಹರಿಬಾಬು, ಕಾರ್ಯದರ್ಶಿ ಎಂ.ಡಿ.ಗೋಪಿನಾಥ್, ಉಪಾಧ್ಯಕ್ಷ ಎಸ್. ಬಾಲಾಜಿ, ಸಹ ಕಾರ್ಯದರ್ಶಿ ಕೆ.ಎನ್. ಫಣೀಶ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net