ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ಅಗತ್ಯ

sid (6)
Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ವಿದ್ಯಾರ್ಥಿಗಳಿಗೆ ನಮ್ಮ ಪರಿಸರ, ಪ್ರಕೃತಿಯ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಿದೆ. ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ ಎಂಬ ಧ್ಯೇಯ ವಾಕ್ಯದೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಹೇಳಿದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ರಾಜ್ಯ ಸಹಕಾರ ಮಹಾಮಂಡಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಉಡುಪಿ ಜಿಲ್ಲೆ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಣ್ಣಿನ ಗಿಡ ನೆಟ್ಟು, ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಹಣ್ಣಿನ ಸಸಿಗಳನ್ನು ವಿತರಿಸಿದರು. ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಬಿ ಹರೀಶ್ ಕಿಣಿ ಬೆಳ್ವೆ, ನಿರ್ದೇಶಕರಾದ ಉದಯ ಶೆಟ್ಟಿ ಶೇಡಿಮನೆ, ದಯಾನಂದ ಆರ್.ಶೆಟ್ಟಿ ಕೆರ್ಜಾಡಿ, ಕೃಷ್ಣ ನಾಯ್ಕ ಸೆಟ್ಟೋಳಿ, ಶಿವರಾಮ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಜಯದೇವ ಹೆಗ್ಡೆ ನೂಜಟ್ಟು, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಕಮ್ಗೋಳಿ, ಕಾರ್ಯದರ್ಶಿ ಕೆ.ಸಂಜೀವ ಆರ್ಡಿ ಹಾಗೂ ಸದಸ್ಯರು, ಮುಖ್ಯಶಿಕ್ಷಕಿ ಯಶೋದಾ ಹಾಗೂ ಶಿಕ್ಷಕ ವೃಂದವರು ಉಪಸ್ಥಿತರಿದ್ದರು. ಯಶೋದಾ ಸ್ವಾಗತಿಸಿದರು. ಕೀರ್ತಿಕುಮಾರ್ ಶೆಟ್ಟಿ ನಿರೂಪಿಸಿದರು. ಅಣ್ಣಯ್ಯ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net