

ಮಡಿಕೇರಿ: ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ಸಂಘಟನೆ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ನಡೆದ ೪೨ನೇ ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-೨೦೨೩ರಲ್ಲಿ ಮಾಪಂಗಡ ಕವಿತಾ ಕರುಂಬಯ್ಯ ನೇತೃತ್ವದ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕೇಂದ್ರದ ೪೨ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಕೇವಲ ೩ ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದು ೩೪ ಚಾಂಪಿಯನ್ ಟ್ರೋಫಿ, ೫ ಚಿನ್ನದ ಪದಕ ಮತ್ತು ೩ ಬೆಳ್ಳಿಯ ಪದಕ ಗೆದ್ದುಕೊಂಡರು.
ದೇಶದ ವಿವಿಧ ಬ್ರೈನೋಬ್ರೈನ್ ಕೇಂದ್ರಗಳ ಒಟ್ಟು ೭೫೦೦ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ಭಾಗವಹಿಸಿದ್ದ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿದ್ದು ಅತಿಹೆಚ್ಚು ಚಾಂಪಿಯನ್ ತಮ್ಮದಾಗಿಸಿಕೊಂಡರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಮ್, ತಾಂತ್ರಿಕ ನಿರ್ದೇಶಕರಾದ ಅರುಲ್ ಸುಬ್ರಮಣ್ಯಮ್ ಹಾಗೂ ಎಲ್ಲಾ ರಾಜ್ಯದ ಸ್ಥಳೀಯ ವ್ಯವಸ್ಥಾಪಕ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಮಡಿಕೇರಿ ಕೇಂದ್ರದ ವಿದ್ಯಾರ್ಥಿಗಳ ಅತ್ತುತ್ಯಮ ಸಾಧನೆಗೆ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಸಾಧನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದನೆಗೆ ಪಾತ್ರರು ಎಂದು ತಿಳಿಸಿದ್ದಾರೆ.