

ಆನಂದಪುರ: ಸಾಗರದ ನೆಹರೂ ಮೈದಾನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಕಬಡ್ಡಿ ವಿಭಾಗದಲ್ಲಿ ಆಚಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಪವನ್, ಕಾರ್ತಿಕ, ಗಣೇಶ, ವಿಶಾಂತ, ಯಶವಂತ, ನಂದೀಶ, ಸಂಪತ್, ಎನ್. ಗಣೇಶ, ಚೇತನ್, ಶೀವರಾಜ್, ನಾಗಾರ್ಜುನ ಆಯ್ಕೆಯಾದ ವಿದ್ಯಾರ್ಥಿಗಳು.