ವಾಸವಿ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

5-kollegal-2,,,,
Published on

ಕೊಳ್ಳೇಗಾಲ : ಪಟ್ಟಣದ ವಾಸವಿ ವಿದ್ಯಾ ಕೇಂದ್ರ(ರಿ) ಶಾಲೆಯ ನಾಲ್ವರು ವಿದ್ಯಾರ್ಥಿಗಳು ಚಾಮರಾಜನಗರ ಡಾ.ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ನ.4 ರಂದು ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ 4*100 ಮೀಟರ್ ಓಟದ ಸ್ಪರ್ಧೆಯಲ್ಲಿ ಮೊಹಮದ್ ರೆಹಾನ್, ಎನ್.ಆರ್.ಪ್ರಣೀತ್, ಎಸ್.ನಿರಂಜನ್, ಎಂ.ಎಸ್.ಸೃಜನ್ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಉದ್ದ ಜಿಗಿತದಲ್ಲಿ ಎಸ್.ನಿರಂಜನ್ ದ್ವಿತೀಯ ಸ್ಥಾನ ಪಡೆದಿದ್ದಾರೆ. 400ಮೀ. ಓಟದಲ್ಲಿ ಎನ್.ಆರ್.ಪ್ರಣೀತ್ ತೃತೀಯ ಸ್ಥಾನ ಪಡೆದಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎ.ಡಿ.ಕುಮಾರ ಕೃಷ್ಣ, ಕಾರ್ಯದರ್ಶಿ ಡಾ.ಪಿ.ಜಿ.ಶ್ರೀಧರ್ ಮತ್ತು ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯಶಿಕ್ಷಕಿ ಬಿ.ಎಸ್.ಗೀತಾ ಹಾಗೂ ದೈಹಿಕ ಶಿಕ್ಷಣದ ಶಿಕ್ಷಕರಾದ ಸಿ.ನಾಗೇಂದ್ರ, ಎಲಿಜಬೆತ್ ಶೀಬಾ, ಆರ್.ಸುನೀಲ್, ಎಂ.ಸುನೀಲ್, ಎ.ಸೌಮ್ಯಾ ಇತರರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net