ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮ ವಿದ್ಯಾರ್ಥಿಗಳು ಭಾಗಿ

raichur
raichur
Published on

ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಸಮಾರಂಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಸೋಮವಾರ ಕಂಡುಬಂದರು.

ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಬೆಳಗ್ಗೆಯಿಂದ ಸಂಜೆವರೆಗೆ ಗ್ರಾಮೀಣ ಭಾಗದ ಜನರು ಬಿತ್ತನೆಗಾಗಿ ಕೆಲವರು ಮನೆಯ ಜಮೀನುಗಳಿಗೆ ತೆರಳಿದರೆ, ಕೆಲವರು ಕೂಲಿ ಕೆಲಸಕ್ಕಾಗಿ ತೆರಳುತ್ತಿರುವುದರಿಂದ ಕಾರ್ಯಕ್ರಮ ಬರಲು ಸಾಧ್ಯವಾಗಿದೆ ಇರುವುದರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ಇತ್ತು.

ಸಿಎಂ ಸೇರಿದಂತೆ ರಾಜ್ಯದ ವಿವಿಧ ಸಚಿವರು ಹಾಗೂ ಶಾಸಕರು ದೊಡ್ಡ ಪ್ರಮಾಣದ ಕಾರ್ಯಕ್ರಮಕ್ಕೆ ನೀರಿಕ್ಷೆಗೂ ಮೀರಿ ಜನರು ಸೇರಿಸುವ ಕೆಲಸ ಸ್ಥಳೀಯ ಶಾಸಕರಿಗೆ ಸಾವಾಲಾಗಿದ್ದರಿಂದ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅನುವು ಮಾಡಿಕೊಡುವ ಉದ್ದೇಶದಿಂದಲೇ ಕಾಲೇಜು ಶಿಕ್ಷಣ ಇಲಾಖೆಯ ಕಲಬುರಗಿಯ ಆಯುಕ್ತರರಿಂದ ಅದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ,ಖಾಸಗಿ,ಅನುದಾನಿತ, ಅನುದಾನ ರಹಿತ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚನೆ ಹೊರಡಿಸಿದ್ದು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕಾರಣವಾಯಿತು. ಆದರೆ ಬೆಳಗ್ಗೆ 7 ಗಂಟೆಗೆ ವಿವಿಧ ಕಾಲೇಜುಗಳಿಂದ ಸಾರಿಗೆ ಬಸ್ ಮೂಲಕ ಆಗಮಿಸಿದ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದೆ ಪರದಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net