

ಕುಂದಾಪುರ: ಸುಳ್ಯದ ವಾರುತಿ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ನಡೆದ ಸಿಐಎಸ್‌ಸಿಇ ಶಾಲೆಗಳ ನ್ಯಾಷನಲ್ ಸ್ಪೋಟ್ಸ್ ಮತ್ತು ಗೇಮ್ಸ್ 2025-26ರ ವಲಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿಗಳಾದ ಅನ್ಮೋಲ್ ಪ್ರಥಮ ಸ್ಥಾನ ಮತ್ತು ಅಪರಾಜಿತ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಪ್ರಫುಲ್ ದ್ವಿತೀಯ ಸ್ಥಾನ, 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ವಾನ್ಯತಾ ತೃತೀಯ ಸ್ಥಾನ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅನ್ಮೋಲ್ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಶರಣ ಕುವಾರ ಅಭಿನಂದಿಸಿದ್ದಾರೆ.