ಸಾರಿಗೆ ಬಸ್ ಸಂಚಾರ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ

14-kollega-3,,,,,,,
Published on

ಕೊಳ್ಳೇಗಾಲ : ಬಸ್ ನಿಲುಗಡೆ ಮಾಡದಿರುವುದನ್ನು ಖಂಡಿಸಿ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಶಾಲಾ-ಕಾಲೇಜು ವಿದ್ಯಾ ರ್ಥಿಗಳು ಗುರುವಾರ ಕೆಎಸ್‌ಆರ್‌ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ಕಾಮಗೆರೆ, ಕೊಂಗರಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ಹೋಗುತ್ತಿದೆ. ಇದರಿಂದ ಕೊಳ್ಳೇಗಾಲದ ಕಡೆಗೆ ತೆರಳುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ಪ್ರತಿಭಟಿಸಿ ಅಕ್ರೋಶ ವ್ಯಕ್ತಪಡಿಸಿದರು. ಸುಮಾರು 7 ಕ್ಕೂ ಹೆಚ್ಚು ಸಾರಿಗೆ ಬಸ್ಸುಗಳನ್ನು ತಡೆದು 45 ನಿಮಿಷಗಳ ಕಾಲ ರಸ್ತೆ ಸಂಚಾರ ತಡೆ ನಡೆಸಿದರು.

ವಿಷಯ ತಿಳಿದ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಪ್ರಯತ್ನಿ ಸಿದರು. ಆದರೂ ಯುವಕರು ಒಪ್ಪಲಿಲ್ಲ.

ಈ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಎಂ.ಆರ್.ಮಂಜುನಾಥ್, ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮನವೊಲಿಸಿ ಚಾಲಕ, ನಿರ್ವಾಹಕರಿಗೆ ಬಸ್ ನಿಲ್ಲಿಸಿ ಹೋಗುವಂತೆ ಸೂಚಿಸಿದ್ದಾರೆ. ಘಟಕ ವ್ಯವಸ್ಥಪಾಕರು ಇನ್ನೊಮ್ಮೆ ಇಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳಿ, ಹೆಚ್ಚುವರಿ ಬಸ್ ನಿಯೋಜನೆ ಮಾಡುವಂತೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net