ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ

9ark-3
ಅರಕಲಗೂಡು ತಾಲೂಕಿನ ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಕೀಲೆ ಸ್ವಾತಿ ಗುಪ್ತ ಮಾತನಾಡಿದರು. ರವೀಂದ್ರ, ಚಲುವಯ್ಯ ಇದ್ದರು.
Published on

ಅರಕಲಗೂಡು: ಸ್ವಾಸ್ಥ್ಯಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ವಕೀಲೆ ಸ್ವಾತಿ ಗುಪ್ತ ಸಲಹೆ ನೀಡಿದರು.

ತಾಲೂಕಿನ ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಂತೆಮರೂರು ವಲಯದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅನೇಕ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಇನ್ನಿತರ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಶೋಚನೀಯವಾಗಿದ್ದು ದುಡಿಯುವ ಶಕ್ತಿ ಕ್ಷೀಣಿಸುತ್ತಿದೆ. ಮಾರಕ ಕಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು. ಕ್ಯಾನ್ಸರ್, ಕ್ಷಯ, ಎಚ್‌ಐವಿ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಾದಕ ವ್ಯಸನ ವಿದ್ಯಾರ್ಥಿಗಳ ವಯಸ್ಸು, ಹದಿಹರೆಯದ ವಯಸ್ಸು ವಿದ್ಯಾರ್ಥಿ ಜೀವನ ಹಾಳು ಮಾಡಲಿದೆ. ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲ ಮೆಟ್ಟಿಲುಗಳು ತನ್ನಷ್ಟಕ್ಕೆ ಜಾರುತ್ತವೆ. ಇಂದಿನ ಸಮಾಜದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಯಾವುದೇ ದುರಭ್ಯಾಸಗಳಿಗೆ ಬಲಿಯಾಗದೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದರು.

ಸಂಸ್ಥೆಯ ವಲಯ ಮೇಲ್ವಿಚಾರಕ ರವೀಂದ್ರ, ಸೇವಾ ಪ್ರತಿನಿಧಿ ಮಂಜುಳಾ, ಶಿಕ್ಷಕರಾದ ಚೆಲುವಯ್ಯ, ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net