

ಕುಂದಾಪುರ: ಕುಂದಾಪ್ರ ಕನ್ನಡ ಸಂಸ್ಕೃತಿ, ಜಾನಪದ ಸೊಗಡು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಗಾದೆಗಳು ಕನ್ನಡ ಭಾಷೆಯ ಆಸ್ತಿಯಾಗಿವೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊರ್ಗಿ ವಿಠಲ ಶೆಟ್ಟಿ ಹೇಳಿದರು.
ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ ಹಾಗೂ ಭಂಡಾರ್ಕಾರ್ಸ್ ಕಾಲೇಜು ವತಿಯಿಂದ ಕಾಲೇಜಿನ ರೇಡಿಯೋ ಕುಂದಾಪ್ರ 89.6 ಸಭಾಂಗಣದಲ್ಲಿ ಭಾನುವಾರ ಜರುಗಿದ ಕುಂದಾಪ್ರ ಕನ್ನಡ ಗಾದೆ ಹೇಳುವ ಸ್ಪರ್ಧೆ ಹಾಗೂ ಕುಂದಾಪ್ರ ಕನ್ನಡ ಶಬ್ದ ಬರೆಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕೊರ್ಗಿ ವಿಠಲ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಕ್, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಪ್ರಮುಖರಾದ ವಿಶ್ವನಾಥ ಕರಬ, ಕಿಶನ್ ಕೆಂಚನೂರು, ಹಂದಕುಂದ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಯು.ಎಸ್.ಶೆಣೈ ಸ್ವಾಗತಿಸಿದರು. ಗೋಪಾಲ ನಾಯ್ಕ ವಂದಿಸಿದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.