ವಿದ್ಯಾರ್ಥಿಗಳು ಕ್ರೀಡೆಗಳಿಗೂ ಆದ್ಯತೆ ನೀಡಲಿ

MDG KRIDAKUTA
Published on

ಮುಂಡರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡಾ ವಲಯಕ್ಕೆ ತುಂಬಾ ಉತ್ತೇಜನ ನೀಡುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ಪುಸ್ತಕ ಹಾಗೂ ಪರೀಕ್ಷೆಗಳಿಗೆ ನೀಡುವಷ್ಟೇ ಮಹತ್ವವನ್ನು ಕ್ರೀಡೆಗಳಿಗೂ ನೀಡಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ತಾಲೂಕಿನ ಕೊರ್ಲಹಳ್ಳಿ ಸಮೀಪದ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜವಾಹರ ನವೋದಯ ವಿದ್ಯಾಲಯಗಳ ಹೈದರಾಬಾದ್ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಪ್ಪತಗುಡ್ಡವು ಉತ್ತರ ಕರ್ನಾಟಕದ ಸುಂದರ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಬಿಡುವು ಮಾಡಿಕೊಂಡು ಎಲ್ಲ ಕ್ರೀಡಾಪಟುಗಳು ಕಪ್ಪತಗುಡ್ಡ ವೀಕ್ಷಿಸಬೇಕು. ಅದರ ಮಹತ್ವ ತಮ್ಮ ರಾಜ್ಯಗಳ ಜನತೆಗೆ ತಿಳಿಸಲು ಶ್ರಮಿಸಬೇಕು ಎಂದು ಮನವಿ ಮಾಡಿಕೊಂಡರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಕ್ರೀಡಾಪಟುಗಳಿಗೆ ಹಲವಾರು ಸರ್ಕಾರಿ ಸೌಲಭ್ಯಗಳಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರಿಗಳಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆದ್ಯತೆ ನೀಡಬೇಕು ಎಂದರು.

ಕೊರ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ಹನುಮವ್ವ, ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಮೈಲಾರೆಪ್ಪ ಕಲಕೇರಿ, ವಿಶ್ವನಾಥ ಉಳ್ಳಾಗಡ್ಡಿ, ಇಬ್ರಾಹಿಂಸಾಬ್, ಮಲ್ಲಿಕಾರ್ಜುನ ಹಣಜಿ ಇತರರಿದ್ದರು.

ಪ್ರಭಾರ ಪ್ರಾಚಾರ್ಯ ಜಿ.ಬಿ. ಬಸವರಾಜು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ.ಎಸ್. ಹಿರೇಮಠ ಹಾಗೂ ವಿಜಯಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net