

ಹೆಬ್ರಿ: ಪ್ರತಿಯೊಬ್ಬ ವ್ಯಕ್ತಿ ಕೂಡ ಅದ್ಭುತವಾದ ಮೆದುಳನ್ನು ಹೊಂದಿರುತ್ತಾನೆ. ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ಅದರ ಸಾಮರ್ಥ್ಯ ಹೊರಹೊಮ್ಮುತ್ತದೆ. ಪಂಚೇಂದ್ರಿಯಗಳಿಂದ ವಿಷಯಗಳನ್ನು ಗ್ರಹಿಸುವ ನಾವು ಅದು ಸದಾ ನೆನಪಿನಲ್ಲಿ ಉಳಿಯಬೇಕಾದರೆ ಮತ್ತೆ ಮತ್ತೆ ಮನನ ವಾಡಬೇಕು. ಕೇಳಿಸಿಕೊಳ್ಳುವುದು ಮತ್ತು ಕಲಿಕೆಯ ನಡುವೆ ವ್ಯತ್ಯಾಸ ಇದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಿರಬೇಕು ಎಂದು ಆಂಗ್ಲಭಾಷೆ ಶಿಕ್ಷಕ ಅಶೋಕ್ ತೆಕ್ಕಟ್ಟೆ ಹೇಳಿದರು.
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಸದಸ್ಯ ವಿಷ್ಣುಮೂರ್ತಿ ನಾಯಕ್, ಪ್ರಾಂಶುಪಾಲ ಪ್ರಕಾಶ್ ಜೋಗಿ, ಪಿಆರ್‌ಒ ವಿಜಯ ಶೆಟ್ಟಿ, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು. ಉಪನ್ಯಾಸಕಿ ಚಂದ್ರಕಲಾ ನಿರೂಪಿಸಿ, ವಂದಿಸಿದರು.