ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು
Published on

ಕುಶಾಲನಗರ: ವಿದ್ಯಾರ್ಥಿಗಳು ಶಿಸ್ತು, ಸಂಯಮದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ಪಿ.ಶಿವಪ್ಪ ಹೇಳಿದರು.

ಸಮೀಪದ ಹೆಬ್ಬಾಲೆ ಪ್ರೌಢಶಾಲೆಯಲ್ಲಿ 8 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಿರುವ ಪಠ್ಯ ಪುಸ್ತಕಗಳನ್ನು ಶನಿವಾರ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಸದ್ಭಳಕೆಮಾಡಿಕೊಳ್ಳಬೇಕು ಎಂದರು.
ಶಾಲೆಯ ಹಿರಿಯ ವಿದ್ಯಾರ್ಥಿ ಎಚ್.ಪಿ.ಉದಯಕುಮಾರ್, ಪ್ರಭಾರ ಮುಖ್ಯ ಶಿಕ್ಷಕ ಎಂ.ಎನ್. ವೆಂಕಟನಾಯಕ್, ಶಿಕ್ಷಕ ಸಿ.ಡಿಲೋಕೇಶ್, ಎ.ಕೆ.ಅನಂತ, ಶ್ವೇತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net