ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು: ದಯಾನಂದ

dayananda
Published on

ಮಡಿಕೇರಿ: ವಿದ್ಯಾರ್ಥಿಗಳು ಸಾರ್ವಜನಿಕ ಸಭೆ ಮತ್ತು ವೇದಿಕೆಗಳಲ್ಲಿ ಮುಕ್ತವಾಗಿ ಮಾತನಾಡುವ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ, ಇಲ್ಲಿನ ಐಕ್ಯೂಎಸಿ ಮತ್ತು ಉದ್ಯೋಗ ಕೋಶ ಸಮಿತಿ ಹಾಗೂ ಜೆಸಿಐ ಪೊನ್ನಂಪೇಟೆ ನಿಸರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಣಾಮಕಾರಿ ಭಾಷಣ ಕಲೆ ಮತ್ತು ಸಂಸತ್ತಿನ ನಡವಳಿ ಕುರಿತ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವದ ಗುಣ ಮತ್ತು ಪ್ರತಿಭಟಿಸುವ ಮನೋಭಾವವನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು. ಪ್ರಸಕ್ತ ರಾಜಕೀಯದ ಕುರಿತು ಜ್ಞಾನ ಪಡೆದುಕೊಂಡು ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜೆಸಿಐ ಪೊನ್ನಂಪೇಟೆ ನಿಸರ್ಗದ ಅಧ್ಯಕ್ಷ ನೀತ್ ಅಯ್ಯಪ್ಪ ಮಾತನಾಡಿ, ಸಮಾಜದ ಕಲ್ಯಾಣಕ್ಕಾಗಿ ನಮ್ಮ ಸಂಸ್ಥೆಯು ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ರಾಷ್ಟ್ರದ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಸಮಾಜ ಸೇವೆಯೇ ನಮ್ಮ ಗುರಿಯಾಗಿದ್ದು ಇಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಜೆಸಿಐನ ಕಾರ್ಯದರ್ಶಿಗಳಾದ ಶರತ್ ಸೋಮಣ್ಣ ಮತ್ತು ಕಾಲೇಜಿನ ಉದ್ಯೋಗ ಕೋಶ ಸಮಿತಿಯ ಸಂಚಾಲಕ ಆರ್.ರಘುರಾಜ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net